ಡಾ.ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ ೧೯೫೨ | ಮರಣ :ಡಿಸೆಂಬರ್ ೩೦ ೨೦೦೯) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ.ವಿಷ್ಣುವರ್ಧನ್ ಇದುವರೆಗೆ ಒಟ್ಟು ಸುಮಾರು ೨೦೦ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿದ್ದಾರೆ. ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾಗಿದ್ದರು.