Quantity
Product Description
ಮೇಘಾಲಯದ ಪರ್ವತಗಳ ಮೇಲೆ ಚರಿತ್ರೆಯ ವಿದ್ಯಾರ್ಥಿಗಳಿಗೆ ಶಿಲಾಯುಗದ ಮಾನವನ ಸಂಸ್ಕೃತಿಯ ಪಳೆಯುಳಿಕೆಯೊಂದನ್ನು ಪರಿಚಯಿಸುತಿದ್ದ ಪಲ್ಲವಿಗೆ ಬಂದ ಕರೆಯೊಂದು ಆಕೆಯನ್ನು ತಲ್ಲಣಗೊಳಿಸುತ್ತದೆ.ಅಮೆರಿಕದ ಕಂಪನಿಯೊಂದಿಗೆ ಕೈ ಜೋಡಿಸಿದ ಮುಂಬೈನ ಉದ್ಯಮಿಯೊಬ್ಬ ಭಾರತದ ಧಾರ್ಮಿಕ ಮತ್ತು ಸಂವಿಧಾನದ ನಿಲುವನ್ನೆ ಬದಲಾಯಿಸುವ ಷಡ್ಯಂತ್ರಕ್ಕೆ ಕೈ ಹಾಕುತ್ತಾನೆ.ಕನ್ನಡದ ಕಾದಂಬರಿಕಾರ ನಾಗಯ್ಯನವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯಿಂದಾಗಿ ಅವರು ಮೂರ್ಛೆಯಸ್ಥಿತಿ ತಲುಪುತ್ತಾರೆ. ಆ ಹಲ್ಲೆಯ ಹಿಂದಿನ ರಹಸ್ಯವು ಅವರು ಬರೆದ ಕಾದಂಬರಿಯಲ್ಲಿಯೇ ಅಡಗಿರಬಹುದು ಎಂಬ ಅನುಮಾನ ಮೂಡುತ್ತದೆ. ಆದರೆ ಮೂರು ಸಾವಿರ ವರ್ಷಗಳ ಹಿಂದಿನ ಮಾನವನ ಬಗೆಗಿನ ಆ ಕಾದಂಬರಿಯ ವಸ್ತುವಿಗೂ ಅವರ ಮೇಲೆ ನಡೆದ ಹಲ್ಲೆಗೂ ಯಾವ ರೀತಿಯ ಸಂಬಂಧ ಇರಲು ಸಾಧ್ಯ?
ಶಿಲಾಯುಗದಲ್ಲಿ ದಕ್ಷಿಣ ಭಾರತದಲ್ಲಿ ಕಾಡಿನಜನ ಪೂಜಿಸುತ್ತಿದ್ದ ಸ್ಥಾನಿಕ ದೈವಗಳ,ಅವರು ನಿರ್ಮಿಸುತ್ತಿದ್ದ ಶಿಲಾವ್ಯೂಹಗಳ.ಸುತ್ತ ಹೆಣೆದ ಕಥಾಹಂದರಕ್ಕೂ,ವರ್ತಮಾನದಲ್ಲಿ ನಡೆಯುತ್ತಿರುವ ಜಾಗತಿಕ ಬೆಳವಣಿಗೆಗಳಿಗೂ ಯಾವ ರೀತಿಯ ನಂಟಿರಲು ಸಾಧ್ಯ?ಆ ನಂಟೇ ನಾಗಯ್ಯನವರ ಮೇಲಿನ ಹತ್ಯೆಯ ಪ್ರಯತ್ನಕ್ಕೆ ಕಾರಣವಾಯಿತೆ?
ಇಂಥಹ ಹಲವು ಪ್ರಶ್ನೆಗಳ ಸುತ್ತ ಬೆಳೆದ ಈ ಚಾರಿತ್ರಿಕ ಕಾದಂಬರಿಯು ಮೂರು ಸಾವಿರ ವರ್ಷಗಳ ಹಿಂದೆ ದಕ್ಷಿಣ ಭಾರತದ ಕಾಡುಗಳಲ್ಲಿ ನೆಲೆಯಾಗಿದ್ದ ಶಿಲಾಯುಗದ ಮಾನವನ ಸಂಸ್ಕೃತಿ ಮತ್ತು ಧಾರ್ಮಿಕ ನಂಬಿಕೆಗಳ ವಿಕಾಸದ ಬಗ್ಗೆ ಒಂದು ಕಿರುನೋಟವನ್ನು ಕಟ್ಟಿಕೊಡುತ್ತದೆ.ಕನ್ನಡ ಕಾದಂಬರಿ ಲೋಕದಲ್ಲಿಯೇ ಒಂದು ಅನನ್ಯ ಪ್ರಯತ್ನ'ಕಾನನ ಜನಾರ್ದನ'
Publisher
Ankitha Pusthaka
ISBN-13
978-93-92230-19-6
Author
Dr K N Ganeshaiah
Binding
Hard Bound
Number of Pages
400
Publication Year
2022
Weight
300
Width
22
Height
1
Length
20
Genre
Novel
Language
Kannada