 
     
Quantity
Product Description
ಒಂದೇ ಹೂವಿನ ಹಲವು ಪಕಳೆಗಳಂತೆ ಇರುವ ಈ ನಿರೂಪಣೆಗಳು ಒಂದು ಹೂವಾಗಿಯೂ, ದಳಗಳಾಗಿಯೂ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೂವು ಮತ್ತು ದಳಗಳಂತೆಯೇ 'ಎನ್ನಾತ್ಮ ಕಂಪಮಿದು' ಎನ್ನುವಂತೆ ಕಂಡೂ ಕಾಣದಂತೆ ಕಂಪಿಸುತ್ತವೆ!
ಒಂದು ಮೂಲಭೂತ ಪ್ರಶ್ನೆ ಇಲ್ಲಿನ ನಿರೂಪಣೆಗಳನ್ನು ನಿರ್ದೇಶಿಸಿದ ಹಾಗೆ ಕಾಣುತ್ತದೆ. ನಡೆದಂತೆ ದಾರಿಯನು ಬಿಚ್ಚಿ ಬೆಳಸುವುದು, ಇದೇ ಬದುಕು ಎನ್ನುವುದು ಸತ್ಯವೆ ಅಥವಾ ನನಗೆ ಬೇಕಾದ ದಾರಿಯನ್ನು ನಾನೇ ಕಂಡುಕೊಳ್ಳಬೇಕು ಎನ್ನುವುದು ಸತ್ಯವೆ? ಈ ನಿರೂಪಣೆಗಳಲ್ಲಿ ನಾಯಕ ನಾಯಕಿಯರಿಲ್ಲ. ಇಲ್ಲಿ ಯಾರೂ ಮುಖ್ಯರೂ ಅಲ್ಲ. ಅಮುಖ್ಯರೂ ಅಲ್ಲ. ಇದೇ ಈ ನಿರೂಪಣೆಗಳನ್ನು ಭಿನ್ನ ಜಾಗದಲ್ಲಿ ಮತ್ತು ಸ್ವರೂಪದಲ್ಲಿ ನಿಲ್ಲಿಸುತ್ತದೆ.
ಕನ್ನಡದ ಅತ್ಯುತ್ತಮ ಕತೆಗಾರ್ತಿಯಾದ ಸುಮಂಗಲಾ ಅವರ ಈ ಕತೆಗಳು - ಇವುಗಳನ್ನು ನಾನು ಉದ್ದಕ್ಕೂ ನಿರೂಪಣೆಗಳೆಂದೇ ಕರೆದಿದ್ದೇನೆ. ಇವು ಸಮಕಾಲೀನ ಸಂದರ್ಭದ ಗಮನಾರ್ಹ ನಿರೂಪಣೆಗಳಾಗಿವೆ -ತೋರಿಕೆಯದಲ್ಲದ, ಕೇವಲ ಬುದ್ಧಿಗತವೂ ಅಲ್ಲದ, ಭಾವುಕತೆಯನ್ನು ಮಾತ್ರ ಆಧರಿಸಿದವು ಎಂದೂ ಅನ್ನಿಸದ ಅಪ್ಪಟ ಮಾನವೀಯ ನಿರೂಪಣೆಗಳಾಗಿವೆ
Binding
Soft Bound
Author
Sumangala
ISBN-13
9789348262905
Number of Pages
144
Publisher
Ankitha Pusthaka
Publication Year
2025
Height
2 CMS
Length
22 CMS
Weight
100 GMS
Width
14 CMS
Language
Kannada